ನೆಹರು ಮೆಮೋರಿಯಲ್ ಪಿ. ಯು ಕಾಲೇಜು, ಸುಳ್ಯ
ವಿದ್ಯಾರ್ಥಿ ಸಂಘ – 2019-20
ಮತ್ತು
ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು
4-7-2019
ಶಿಕ್ಷಣ, ವೃತ್ತಿ, ಸುರಕ್ಷತೆ ಮತ್ತು ಮಾದಕ ದ್ರವ್ಯ ವ್ಯಸನಗಳ ಬಗ್ಗೆ ಜಾಗೃತಿ ಕಾರ್ಯಕ್ರಮ
ನಾವು ಆತ್ಮಗೌರವ ಹೊಂದಿ ಮುನ್ನಡೆಯುವುದೇ ನಮ್ಮ ಸಾಧನೆಗೆ ಪ್ರಮುಖ ಅಸ್ತ್ರ – ಶ್ರೀಕಾಂತ್ ಪೂಜಾರಿ ಬಿರವು
“ವಿದ್ಯಾರ್ಥಿಗಳು ಸ್ಪಷ್ಟ ಗುರಿಯನ್ನು ಹೊಂದಿ ಜೀವನ ಶೈಲಿ ರೂಪಿಸಿಕೊಳ್ಳಬೇಕು, ವಿದ್ಯಾರ್ಥಿ ಹಂತದಲ್ಲಿ ಚೆನ್ನಾಗಿ ಓದಿ, ಓದಿದ್ದನ್ನು ಮನನ ಮಾಡಿಕೊಳ್ಳಬೇಕು. ನಾವು ಆತ್ಮಗೌರವ ಹೊಂದಿರುವುದೇ ನಮ್ಮ ಸಾಧನೆಗೆ ಪ್ರಮುಖ ಅಸ್ತ್ರ “ ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಜಿಲ್ಲಾ ಯುವ ಪರಿವರ್ತಕರಾದ ಶ್ರೀಕಾಂತ್ ಪೂಜಾರಿ ಬಿರವು , ಅವರು ಹೇಳಿದರು. ಅವರು ನೆಹರು ಮೆಮೋರಿಯಲ್ ಪಿ. ಯು ಕಾಲೇಜು, ಸುಳ್ಯ ಇಲ್ಲಿನ ವಿದ್ಯಾರ್ಥಿ ಸಂಘ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಇದರ ಸಹಯೋಗದಲ್ಲಿ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ವಿದ್ಯಾರ್ಥಿಗಳು ದುಶ್ಚಟಗಳಿಂದ, ಸಾಮಾಜಿಕ ಜಾಲತಾಣಗಳಿಂದ ದೂರವಿರಿ . ಒಮ್ಮೆ ಅದಕ್ಕೆ ಬಲಿಯಾದರೆ ಜೀವನ ನಾಶವಾದಂತೆ. ಧನಾತ್ಮಕ ಉದ್ದೇಶ ಮತ್ತು ಸ್ವ-ಅರಿವನ್ನು ಹೊಂದಿ ಮುನ್ನಡೆಯಿರಿ ಎಂದು ಕರೆ ನೀಡಿದರು.
ಕಾಲೇಜಿನ ಪ್ರಾಂಶುಪಾಲರು ಶ್ರೀಮತಿ ಹರಿಣಿ ಪುತ್ತೂರಾಯ ಅವರು ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಉಪನ್ಯಾಸಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀ ಲಕ್ಷ್ಮಣ್ ಏನೆಕಲ್ ಅವರು ಸ್ವಾಗತಿಸಿ ವಂದಿಸಿದರು.
ಎಂದು ಶ್ರೀಕಾಂತ್ ಪೂಜಾರಿ ಬಿರವು , ಜಿಲ್ಲಾ ಯುವ ಪರಿವರ್ತಕರು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ , ಮಂಗಳೂರು ಅವರು ಹೇಳಿದರು. ಅವರು ನೆಹರು ಮೆಮೋರಿಯಲ್ ಪಿ. ಯು ಕಾಲೇಜು, ಸುಳ್ಯ ಇಲ್ಲಿನ ವಿದ್ಯಾರ್ಥಿ ಸಂಘ ಮತ್ತು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಮಂಗಳೂರು ಇದರ ಸಹಯೋಗದಲ್ಲಿ ನಡೆದ ಜಾಗೃತಿ ಕಾರ್ಯಕ್ರಮದಲ್ಲಿ ವಿದ್ಯಾರ್ಥಿಗಳನ್ನು ಉದ್ದೇಶಿಸಿ ಮಾತನಾಡುತ್ತಿದ್ದರು. ಈ ಸಂದರ್ಭದಲ್ಲಿ ಶಿಕ್ಷಣ, ವೃತ್ತಿ, ಸುರಕ್ಷತೆ ಮತ್ತು ಮಾದಕ ದ್ರವ್ಯ ವ್ಯಸನಗಳ ಬಗ್ಗೆ ವಿಶೇಷವಾದ ಮಾಹಿತಿಯನ್ನು ನೀಡಿ ವಿದ್ಯಾರ್ಥಿಗಳಿಗೆ ಅರಿವು ಮೂಡಿಸಿದರು .
ಕಾಲೇಜಿನ ಪ್ರಾಂಶುಪಾಲರು ಶ್ರೀಮತಿ ಹರಿಣಿ ಪುತ್ತೂರಾಯ ಅವರು ಅಧ್ಯಕ್ಷತೆ ವಹಿಸಿದ್ದರು. ಕಾಲೇಜಿನ ಉಪನ್ಯಾಸಕರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ವಿದ್ಯಾರ್ಥಿ ಕ್ಷೇಮಪಾಲನಾಧಿಕಾರಿ ಶ್ರೀ ಲಕ್ಷ್ಮಣ್ ಏನೆಕಲ್ ಅವರು ಸ್ವಾಗತಿಸಿ ವಂದಿಸಿದರು.