ಕಾನೂನು ಕ್ಷೇತ್ರ ವಿಶಾಲವಾದುದು. ಪ್ರಪಂಚದ ಮೂಲೆ ಮೂಲೆಗಳಲ್ಲಿ ಒಳ್ಳೆಯ ಉದ್ಯೋಗವನ್ನು ಆಯ್ಕೆ ಮಾಡಿಕೊಳ್ಳಲು ಕಾನೂನು ಶಿಕ್ಷಣ ಬಹು ಮುಖ್ಯ ಹಾಗೂ ಅತ್ಯಂತ ಗೌರವದ ಸ್ಥಾನವನ್ನು ಸಮಾಜದಲ್ಲಿ ಗಳಿಸಲು ಈ ಹುದ್ದೆ ನೆರವಾಗುವುದು. ” ಎಂದು ಕೆ.ವಿ.ಜಿ ಕಾನೂನು ಮಹಾವಿದ್ಯಾಲಯದ ಸಹ ಪ್ರಾಧ್ಯಾಪಕರಾದ ಶ್ರೀ ಕೌಶಿಕ್ ಸಿ ಅವರು ಹೇಳಿದರು. ಅವರು ನೆಹರು ಮೆಮೋರಿಯಲ್ ಪಿ. ಯು ಕಾಲೇಜು ವಿದ್ಯಾರ್ಥಿಗಳಿಗಾಗಿ ಪಿಯು ನಂತರ ಕಾನೂನು ಶಿಕ್ಷಣಾವಕಾಶಗಳ ಕುರಿತ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.
ಆಧುನಿಕ ಯುಗದಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಉದ್ಯೋಗಾವಕಾಶಗಳನ್ನು ಪಡೆಯುವಲ್ಲಿ ಕಾನೂನು ಶಿಕ್ಷಣ ಮುಖ್ಯ ಪಾತ್ರ ವಹಿಸುವುದು ಎಂದು ಹೇಳಿದರು. ಕಾನೂನು ಪದವಿಯನ್ನು ಪಡೆಯುವುದರ ಮೂಲಕ ಸಮಾಜದಲ್ಲಿ ಜವಾಬ್ದಾರಿಯುತ ವ್ಯಕ್ತಿಗಳಾಗಿ, ಸಮಾಜ ಸೇವೆಯಲ್ಲೂ ತೊಡಗಿಸಿಕೊಳ್ಳಿ ಎಂದು ಕರೆ ನೀಡಿದರು. ಪ್ರಸ್ತುತ ಕಾಲಘಟ್ಟದಲ್ಲಿ ವಿದ್ಯಾರ್ಥಿಗಳು ಸಾಮಾಜಿಕ ಜಾಲತಾಣಗಳಿಂದ ದೂರವಿದ್ದು ಆರೋಗ್ಯಕರ ಸಮಾಜ ನಿರ್ಮಾಣಕ್ಕೆ ಕೈಜೋಡಿಸಬೇಕೆಂದು ಹೇಳಿದರು. ಅಪರಾಧಿ ಕೃತ್ಯಗಳಿಂದ ದೂರವಿದ್ದು ಉತ್ತಮ ವ್ಯಕ್ತಿಗಳಾಗಿ ಬಾಳಿ ಎಂದು ಕಿವಿಮಾತು ಹೇಳಿದರು.
ಅಧ್ಯಕ್ಷತೆಯನ್ನು ಪ್ರಾಂಶುಪಾಲರಾದ ಶ್ರೀಮತಿ ಹರಿಣಿ ಪುತ್ತೂರಾಯ ವಹಿಸಿದ್ದರು. ವೇದಿಕೆಯಲ್ಲಿ ವಿದ್ಯಾರ್ಥಿ ಕ್ಷೇಮಪಾಲಕರಾದ ಶ್ರೀ ಲಕ್ಷ್ಮಣ್ ಏನೆಕಲ್ ಅವರು ಉಪಸ್ಥಿತರಿದ್ದರು. ಸಂಖ್ಯಾ ಶಾಸ್ತ್ರ ಉಪನ್ಯಾಸಕಿ ಕು. ಹರ್ಷಿತ ಅವರು ಸ್ವಾಗತಿಸಿ , ಅರ್ಥಶಾಸ್ತ್ರ ಉಪನ್ಯಾಸಕ ಶ್ರೀ ವಿನಯ ವಂದಿಸಿದರು. ಕನ್ನಡ ಉಪನ್ಯಾಸಕಿ ಕು. ಬೇಬಿ ವಿದ್ಯಾ ಕಾರ್ಯಕ್ರಮ ನಿರ್ವಹಿಸಿದರು.