ಪದವಿಪೂರ್ವ ಶಿಕ್ಷಣ ಇಲಾಖೆ ಮಂಗಳೂರು ಮತ್ತು ನೆಹರು ಮೆಮೋರಿಯಲ್ ಪ.ಪೂ ಕಾಲೇಜು ಸುಳ್ಯ ಇದರ ಸಹಯೋಗದಲ್ಲಿ ತಾಲೂಕು ಮಟ್ಟದ ಪದವಿಪೂರ್ವ ವಿಭಾಗದ ಕ್ರೀಡಾಕೂಟ ಅಕ್ಟೊಬರ್ 1 ರಂದು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು ಇಲ್ಲಿನ ಕ್ರೀಡಾಂಗಣದಲ್ಲಿ ಉದ್ಘಾಟನೆಗೊಂಡಿತು.
ಕ್ರೀಡೆಯಲ್ಲಿ ವಿಶೇಷ ಸಾಧನೆ ಮಾಡಿದ ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು ಇಲ್ಲಿನ ವಿದ್ಯಾರ್ಥಿಗಳು ಕ್ರೀಡಾಜ್ಯೋತಿಯನ್ನು ಹೊತ್ತು ಕ್ರೀಡಾಂಗಣವನ್ನು ಪ್ರವೇಶಿಸುವುದರೊಂದಿಗೆ ಕ್ರೀಡಾಕೂಟವನ್ನು ಕೆವಿಜಿ ಸಮೂಹ ಸಂಸ್ಥೆಗಳ ನಿರ್ದೇಶಕರಾದ ಶ್ರೀಮತಿ ಶೋಭಾ ಚಿದಾನಂದ ರವರು ದ್ವಜಾರೋಹಣಗೈದು, ದೀಪ ಬೆಳಗುವುದರ ಮೂಲಕ ಉದ್ಘಾಟಿಸಿದರು. ಬಳಿಕ ಮಾತನಾಡಿದ ಅವರು ಕ್ರೀಡೆಯಲ್ಲಿ ತೊಡಗಿಸಿಕೊಳ್ಳುವುದು ಮುಖ್ಯ ಮತ್ತು ಸೋಲು ಗೆಲುವುಗಳನ್ನು ಸಮಭಾವದಿಂದ ಸ್ವೀಕರಿಸಿ ಮುನ್ನಡೆಯಿರಿ ಎಂದು ಕರೆ ನೀಡಿದರು ಮತ್ತು ಭಾಗವಹಿಸುತ್ತಿರುವ ಎಲ್ಲ ಕ್ರೀಡಾಪಟುಗಳಿಗೆ ಶುಭ ಹಾರೈಸಿದರು
ಅಧ್ಯಕ್ಶತೆ ವಹಿಸಿ ಮಾತನಾಡಿದ ಸಂಸ್ಥೆಯ ಶೈಕ್ಷಣಿಕ ಸಲಹೆಗಾರರಾದ ಪ್ರೊ ಬಾಲಚಂದ್ರ ಗೌಡ ರವರು ಮಾತನಾಡಿ ವಿದ್ಯಾರ್ಥಿಗಳು ರಾಜ್ಯ ರಾಷ್ಟ್ರ ಮಟ್ಟದ ಕ್ರೀಡೆಗಳಲ್ಲಿ ಭಾಗವಹಿಸಿ ಉತ್ತಮ ಪ್ರದರ್ಶನ ತೋರುವಂತಾಗಲಿ ಎಂದು ಶುಭ ಹಾರೈಸಿದರು.
ಕಾರ್ಯಕ್ರಮದಲ್ಲಿ ನೆಹರು ಮೆಮೋರಿಯಲ್ ಪದವಿ ಕಾಲೇಜಿನ ಪ್ರಾಂಶುಪಾಲರು ಡಾ. ಗಿರಿಧರ್ ಗೌಡ , ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ಆಡಳಿತಾಧಿಕಾರಿ ಶ್ರೀ ಜಗದೀಶ್ ಅಡ್ತಲೆ , ಕ್ಯಾಂಪಸ್ ವಿದ್ಯಾರ್ಥಿ ಕ್ಷೇಮಾಧಿಕಾರಿ ಪ್ರೊ ಜವರೇ ಗೌಡ ಭಾಗವಹಿಸಿದ್ದರು. ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು ಇಲ್ಲಿನ ಪ್ರಾಂಶುಪಾಲರು ಹರಿಣಿ ಪುತ್ತೂರಾಯ ಸ್ವಾಗತಿಸಿ , ದೈಹಿಕ ನಿರ್ದೇಶಕರಾದ ಶ್ರೀ ನಾಗರಾಜ್ ಭಟ್ಕಳ್ ಅವರು ವಂದಿಸಿದರು.