ಸಿಇಟಿ ನೀಟ್ ಪರೀಕ್ಷೆಗಳ ತರಬೇತಿಯ ಕುರಿತು ಮಾಹಿತಿ ಕಾರ್ಯಕ್ರಮ

ಸ್ಪರ್ಧಾತ್ಮಕ  ಪರೀಕ್ಷೆಗಳಾದ ಸಿಇಟಿ ನೀಟ್ ಪರೀಕ್ಷೆಗಳ  ತರಬೇತಿಯ ಕುರಿತು ಮಾಹಿತಿ ಕಾರ್ಯಕ್ರಮವು ಸುಳ್ಯದ ನೆಹರು ಮೆಮೋರಿಯಲ್ ಪ.ಪೂ. ಕಾಲೇಜಿನಲ್ಲಿ ನಡೆಯಿತು.ಸಭಾಧ್ಯಕ್ಷತೆಯನ್ನು ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಪ್ರೊ ಎಂ ಬಾಲಚಂದ್ರ ಗೌಡ ಅವರು ವಹಿಸಿದ್ದರು.ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದ ಪುತ್ತೂರು ವಿವೇಕಾನಂದ ಕಾಲೇಜಿನ ಭೌತ ಶಾಸ್ತ್ರ ವಿಭಾಗ ದ ಸಹಾಯಕ ಪ್ರಾಧ್ಯಾಪಕ ಡಾ. ಶ್ರೀಶ ಭಟ್ ಅವರು ಮಾತನಾಡಿ ಭವಿಷ್ಯದಲ್ಲಿ ಉದ್ಯೋಗ ಗಳಿಸಲು ಜ್ಞಾನ, ಕೌಶಲ್ಯ ಅಭಿವೃದ್ಧಿ ಮುಖ್ಯ. ಮಕ್ಕಳು ಓದುವ ವಿಧಾನವನ್ನು ಚೆನ್ನಾಗಿ ತಿಳಿದುಕೊಂಡು ಕಲಿಕೆಯಲ್ಲಿ ತೊಡಗಿಸಿಕೊಳ್ಳಬೇಕು. ನಿರಂತರ ಅಭ್ಯಾಸ, ಸಂವಹನ ಕಲೆ ರೂಢಿಸಿಕೊಳ್ಳುವುದರಿoದ ಯಶಸ್ಸು ಸಾಧ್ಯ ಎಂದರು. ವೇದಿಕೆಯಲ್ಲಿ ಪ್ರಾoಶುಪಾಲರಾದ ಹರಿಣಿ ಪುತ್ತೂರಾಯ, ವಿದ್ಯಾರ್ಥಿ ಕ್ಷೇಮಾಧಿಕಾರಿ ದಾಮೋದರ ಪಿ ಉಪಸ್ಥಿತ ರಿದ್ದರು.ವಿದ್ಯಾರ್ಥಿ ಅಭಿಷೇಕ್ ಪ್ರಾರ್ಥಿಸಿ, ಉಪನ್ಯಾಸಕಿ ರತ್ನಾವತಿ ಸ್ವಾಗತಿಸಿದರು. ಪ್ರಾoಶುಪಾಲರಾದ ಹರಿಣಿ ಪುತ್ತೂರಾಯ ಅವರು ಪ್ರಾಸ್ತಾವಿಕ ನುಡಿಗಳನ್ನಾಡಿದರು.ಸ್ಪರ್ಧಾತ್ಮಕ

ಪರೀಕ್ಷೆಗಳ ಸಂಯೋಜಕಿ  ವಿನುತ ಅತಿಥಿಗಳನ್ನು ಪರಿಚಯಿಸಿದರು.ವಿ.ಕ್ಷೇಮಾಧಿಕಾರಿ ದಾಮೋದರ ಪಿ ವಂದಿಸಿದರು.ಉಪನ್ಯಾಸಕಿ ರೇಖಾ ನಿರೂಪಿಸಿದರು.ಈ ಸಂದರ್ಭದಲ್ಲಿ ವಿಜ್ಞಾನ ವಿಭಾಗದ ವಿದ್ಯಾರ್ಥಿಗಳ ಹೆತ್ತವರು ಮತ್ತು ವಿದ್ಯಾರ್ಥಿಗಳು ಉಪಸ್ಥಿತ ರಿದ್ದರು.ಕಾರ್ಯಕ್ರಮದಲ್ಲಿ ಸಂಪನ್ಮೂಲ ವ್ಯಕ್ತಿಗಳು -ಪೋಷಕರೊಂದಿಗೆ ಸಂವಾದ ನಡೆಯಿತು.