The Academy Of Liberal Education
ಸುಳ್ಯ: ಸೆ 8 ರಂದು ಸ ಪ ಪೂ ಕಾಲೇಜು ಗುತ್ತಿಗಾರು ಇಲ್ಲಿ ನಡೆದ ಪದವಿ ಪೂರ್ವ ವಿಭಾಗದ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಸುಳ್ಯದ ನೆಹರು ಮೆಮೋರಿಯಲ್ ಪ.ಪೂ ಕಾಲೇಜಿನ ದ್ವಿತೀಯ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಸುಜಿತ್ ಎಂ ಜಿ ಅತ್ಯುತ್ತಮ ಪ್ರದರ್ಶನ ನೀಡಿದ್ದು ಜಿಲ್ಲಾ ಮಟ್ಟದ ಪಂದ್ಯಾಟಕ್ಕೆ ಆಯ್ಕೆಯಾಗಿದ್ದಾರೆ. ಇವರು ಸರಕಾರಿ ಪದವಿ ಪೂರ್ವ ಕಾಲೇಜು ಗುತ್ತಿಗಾರು ಇಲ್ಲಿನ ದೈಹಿಕ ಶಿಕ್ಷಣ ಶಿಕ್ಷಕರಾಗಿರುವ ಗೋಪಾಲ್ ಏನೆಕಲ್ ಹಾಗೂ ಸುನಿತಾ ಇವರ ಪುತ್ರ. ಸಾಧಕ ವಿದ್ಯಾರ್ಥಿಯನ್ನು ಆಡಳಿತ ಮಂಡಳಿ, ಪ್ರಾoಶುಪಾಲರು, ಬೋಧಕ ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.
The Academy Of Liberal Education
©copyright KVGMCH 2022