ಕೆ ವಿ ಜಿಯವರು ಶಿಕ್ಷಣ ಸಂಸ್ಥೆಗಳನ್ನು ಸ್ಥಾಪಿಸಿ ವಿದ್ಯಾದಾನ ಮಾಡಿ ಸಮಾಜದ ಏಳಿಗೆಗೆ ಶ್ರಮಿಸಿದವರು .ಗೆಲುವಿಗೆ ವಿದ್ಯೆ ಕಾರಣ.ಇದು ಅಂತರ್ಗತ ಸಾಮರ್ಥ್ಯವನ್ನು ಹೆಚ್ಚಿಸುತ್ತದೆ.ಯೋಗ ವಿದ್ಯೆಯನ್ನು ಅನುಸರಿಸುವ ಮೂಲಕ ನಾವು ಉನ್ನತಿ ಸಾಧಿಸಬಹುದು.ಸಾಮಾಜಿಕ ಸಮಾನತೆ,ದೇಶ ಪ್ರೇಮ,ಭಾಷಾ ಪ್ರೇಮ,ಬಡವರ ಬಗ್ಗೆ ಕಾಳಜಿ ಹೊಂದಬೇಕು.ಆಗ ಮಾತ್ರ ಬದುಕಿಗೆ ಅರ್ಥ ಬರುತ್ತದೆ.ಎಂದು ಸ್ನೇಹ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ ಚಂದ್ರಶೇಖರ ದಾಮ್ಲೆ ಹೇಳಿದರು.ಅವರು ಸುಳ್ಯದ ನೆಹರು ಮೆಮೋರಿಯಲ್ ಪಪೂ ಕಾಲೇಜಿನಲ್ಲಿ ನಡೆದ ವಿದ್ಯಾರ್ಥಿ ಸಂಘದ ಉದ್ಘಾಟನೆ ಮತ್ತು ಪ್ರತಿಭಾ ಪುರಸ್ಕಾರದಲ್ಲಿ ಮುಖ್ಯ ಅತಿಥಿಯಾಗಿ ಮಾತನಾಡುತ್ತಿದ್ದರು.ಸಮಾರಂಭವನ್ನು ಉದ್ಘಾಟಿಸಿ,ಅಧ್ಯಕ್ಷತೆ ವಹಿಸಿ ಮಾತನಾಡಿದ ಎ ಓ ಎಲ್ ಈ (ರಿ )ಉಪಾಧ್ಯಕ್ಷೆ ಶೋಭಾ ಚಿದಾನಂದ ಅವರು ಮಾತನಾಡಿ ಕುರುಂಜಿಯವರು ಶಿಕ್ಷಣದ ಮೂಲಕ ಸಮಾಜದ ಉನ್ನತಿಗೆ ಶ್ರಮಿಸಿದವರು.ವಿದ್ಯಾರ್ಥಿಗಳು ನಾಯಕತ್ವ ಗುಣ ಬೆಳೆಸಿಕೊಂಡು ಸ್ಫೂರ್ತಿಯಿಂದ ತಮ್ಮ ಬದುಕಿನ ಉನ್ನತಿಗೆ ತೊಡಗಿಸಿಕೊಳ್ಳಿ ಎಂದು ಹೇಳಿದರು.
ವೇದಿಕೆಯಲ್ಲಿ ಕಾಲೇಜಿನ ಶೈಕ್ಷಣಿಕ ಸಲಹೆಗಾರರಾದ ಪ್ರೊ ಬಾಲಚಂದ್ರ ಗೌಡ,ಕಾಲೇಜಿನ ಪ್ರಾಚಾರ್ಯರಾದ ಹರಿಣಿ ಪುತ್ತೂರಾಯ,ವಿದ್ಯಾರ್ಥಿ ಕ್ಷೇಮಧಿಕಾರಿಗಳಾದ ರೇಷ್ಮಾ ಎಂ ಎಂ,ಹರೀಶ ಸಿ ಹಾಗೂ ವಿದ್ಯಾರ್ಥಿ ಸಂಘದ ಪದಾಧಿಕಾರಿಗಳಾದ ಅಕ್ಷಯ್ ರೈ, ಅಜ್ಞಾ ಐಪಲ್, ಮನೋಜ್ ಎಸ್ ಆರ್, ಅಂಬಿಕಾ ಕೆ ಎಸ್, ಅಬ್ದುಲ್ ರೌಫ್ ಉಪಸ್ಥಿತರಿದ್ದರು.ವಿದ್ಯಾರ್ಥಿನಿಯರಾದ ಅಭಿಜ್ಞಾ ಮತ್ತು ಬಳಗ ಪ್ರಾರ್ಥಿಸಿದರು.ವಿದ್ಯಾರ್ಥಿ ಕ್ಷೇಮಾಧಿಕಾರಿ ರೇಷ್ಮಾ ಎಂ ಎಂ ಸ್ವಾಗತಿಸಿ,ಪ್ರತಿಜ್ಞಾ ವಿಧಿ ಬೋಧಿಸಿದರು.ಈ ಸಂದರ್ಭದಲ್ಲಿ ವಿದ್ಯಾರ್ಥಿ ಸಂಘದ ನಾಯಕರು ಮತ್ತು ವಿದ್ಯಾರ್ಥಿ ಪ್ರತಿನಿಧಿಗಳಿಗೆ ಬ್ಯಾಡ್ಜ್ ಪ್ರದಾನ ನೆರವೇರಿಸಲಾಯಿತು.ದ್ವಿತೀಯ ಪಿಯುಸಿಯಲ್ಲಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣಗೊಂಡ ವಿದ್ಯಾರ್ಥಿಗಳಿಗೆ ಪುರಸ್ಕಾರ ನೆರವೇರಿತು.ಹಿರಿಯ ವಿದ್ಯಾರ್ಥಿನಿಯರಾದ ಸೌದ,ನಿಶ್ವಿತಾ ಅನಿಸಿಕೆ ವ್ಯಕ್ತ ಪಡಿಸಿದರು.ವಿದ್ಯಾರ್ಥಿ ಕ್ಷೇಮಾಧಿಕಾರಿ ಹರೀಶ ಸಿ ವಂದಿಸಿದರು.ಉಪನ್ಯಾಸಕರಾದ ಬೇಬಿ ವಿದ್ಯಾ ಪಿ.ಬಿ. ಮತ್ತು ವಿನುತಾ ಕೆ ಎನ್ ನಿರೂಪಿಸಿದರು.