NMPUC Boys Team Selected For District Level Volleyball Tournament

ಸುಳ್ಯ ಎನ್ನೆoಪಿಯುಸಿಯ ಹುಡುಗರ ತಂಡ ತಾಲೂಕು ಮಟ್ಟದ ವಾಲಿಬಾಲ್ ಪಂದ್ಯಾಟದಲ್ಲಿ ಪ್ರಥಮ

ಪ.ಪೂ ಶಿಕ್ಷಣ ಇಲಾಖೆಯ ವತಿಯಿಂದ ರೋಟರಿ ಸಂಯುಕ್ತ ಪ.ಪೂ ಕಾಲೇಜು ಮಿತ್ತಡ್ಕ-ಆಲೆಟ್ಟಿ , ಸುಳ್ಯ ಇಲ್ಲಿ ನಡೆದ ತಾಲೂಕು ಮಟ್ಟದ ಹುಡುಗರ ವಾಲಿಬಾಲ್ ಪಂದ್ಯಾಟದಲ್ಲಿ ನೆಹರು ಮೆಮೋರಿಯಲ್ ಪ.ಪೂ. ಕಾಲೇಜು ಸುಳ್ಯ ಇಲ್ಲಿನ ಹುಡುಗರ ತಂಡ ಪ್ರಥಮ ಸ್ಥಾನ ಪಡೆದುಕೊಂಡಿದ್ದು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾಗಿದ್ದಾರೆ .ಈ ಪೈಕಿ ಕಾಲೇಜಿನ ಪ್ರಥಮ ವಿಜ್ಞಾನ ವಿಭಾಗದ ವಿದ್ಯಾರ್ಥಿ ಹಂಝತುಲ್ ಕರಾರ್ ಸರ್ವಾoಗೀಣ ಆಟಗಾರ, ಹಾಗೂ ಪ್ರಥಮ ವಾಣಿಜ್ಯ ವಿಭಾಗದ ವಿದ್ಯಾರ್ಥಿ ಎಂ.ವಿಶಾಲ್ ಉತ್ತಮ ದಾಳಿಗಾರ ಬಹುಮಾನವನ್ನು ಪಡೆದುಕೊಂಡಿದ್ದಾರೆ.

ಸಾಧಕ ವಿದ್ಯಾರ್ಥಿಗಳನ್ನು ಆಡಳಿತ ಮಂಡಳಿ, ಪ್ರಾ oಶುಪಾಲರು, ಬೋಧಕ -ಬೋಧಕೇತರ ವೃಂದದವರು ಅಭಿನಂದಿಸಿದ್ದಾರೆ.