Talents Day celebrations-2026

ಸುಳ್ಯದ ನೆಹರು ಮೆಮೋರಿಯಲ್ ಪಪೂ ಕಾಲೇಜಿನಲ್ಲಿ  ವಿದ್ಯಾರ್ಥಿ ಸಂಘದ ವತಿಯಿಂದ ಟ್ಯಾಲೆಂಟ್ಸ್ ಡೇ ಕಾರ್ಯಕ್ರಮ ಕಾಲೇಜು ಆಡಿಟೋರಿಯಂನಲ್ಲಿ ನಡೆಯಿತು. ಪ್ರಾಚಾರ್ಯರಾದ ಮಿಥಾಲಿ ಪಿ ರೈ ಅವರು ಮಾರ್ಗದರ್ಶನ ನೀಡಿದ್ದರು. ಪ್ರಭಾರ ಪ್ರಾಚಾರ್ಯರಾದ ಸಾವಿತ್ರಿ ಕೆ,ವಿದ್ಯಾರ್ಥಿ ಕ್ಷೇಮಾಧಿಕಾರಿ ರೇಷ್ಮಾ ಎಂ ಎಂ,ಉಪನ್ಯಾಸಕ ವೃಂದದವರು-ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.ವಿದ್ಯಾರ್ಥಿಗಳು ಹಾಡು,ನೃತ್ಯ ವಿವಿಧ ವಿನೋದಾವಳಿಗಳನ್ನು ಸಾದರಪಡಿಸಿದರು.ಉಪನ್ಯಾಸಕ ವಿನಯ್ ನಿಡ್ಯಮಲೆ, ವಿದ್ಯಾರ್ಥಿ ಮಹಮ್ಮದ್ ಆಶಿಕ್ ತಂಡದವರು ಕಾರ್ಯಕ್ರಮ ನಡೆಸಿಕೊಟ್ಟರು.ವಿದ್ಯಾರ್ಥಿ ಸಂಘದ ಸಾಂಸ್ಕೃತಿಕ ಕಾರ್ಯದರ್ಶಿ ಡಿಂಪಲ್ ಸ್ವಾಗತಿಸಿ,ವಿದ್ಯಾರ್ಥಿ ಪ್ರತಿನಿಧಿ ಅನಘ ಸೋನಾ ವಂದಿಸಿದರು.