ಇಲ್ಲಿನ ನೆಹರು ಮೆಮೋರಿಯಲ್ ಪ ಪೂ ಕಾಲೇಜಿನ ವತಿಯಿಂದ ‘ಕಂಡದ ಗೌಜಿ ‘ ಸಿಸನ್ 3 ಕ್ರೀಡಾ ಕೂಟವು ಕೊರಂಗು ಬೈಲು ಗದ್ದೆ,ಅಜ್ಜಾವರ ಇಲ್ಲಿ ನಡೆಯಿತು. ಕಾರ್ಯಕ್ರಮದ ಉದ್ಘಾಟಕರಾದ, ಗದ್ದೆಯ ಮಾಲಿಕರಾದ ನಿವೃತ್ತ ದೈ ಶಿ ಶಿಕ್ಷಕ ಬಾಲಕೃಷ್ಣ ನಾಯ್ಕ್ ಅವರು ಮಾತನಾಡಿ ನಮ್ಮ ಕೃಷಿ ಪ್ರಧಾನ ಸಂಸ್ಕೃತಿಯನ್ನು ಪ್ರೋತ್ಸಾಹಿಸಬೇಕು. ಯುವ ಜನಾಂಗ ಅದನ್ನು ಮುಂದುವರಿಸಿಕೊಂಡು ಹೋದಾಗ ನಮ್ಮ ಶ್ರೀಮಂತ ರೈತ ಸಂಸ್ಕೃತಿ ಉಳಿಯಲು ಸಾಧ್ಯ ಎಂದರು.
ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಪ್ರಾಚಾರ್ಯರಾದ ಮಿಥಾಲಿ ಪಿ ರೈ ಅವರು ಮಾತನಾಡಿ ನಮ್ಮ ಮೂಲ ಸಂಸ್ಕೃತಿಯನ್ನು ನಾವೆಲ್ಲರೂ ಬೆಳೆಸಿದಾಗ ಅದರ ಪರಿಚಯ ನಮಗೆ ಆಗಲು ಸಾಧ್ಯ ಎಂದರು.ಮುಖ್ಯ ಅತಿಥಿಗಳಾಗಿ ಪ್ರತಾಪ ಯುವಕ ಮಂಡಲ ಅಜ್ಜಾವರ ಇದರ ಅಧ್ಯಕ್ಷ ಗುರುರಾಜ್ ಅಜ್ಜಾವರ, ಚೈತ್ರ ಯುವತಿ ಮಂಡಲ ಅಜ್ಜಾವರ ಇದರ ಅಧ್ಯಕ್ಷೆ ಶಶ್ಮಿ ಭಟ್ ಹಂಚಿನ ಮನೆ, ಸಂಸ್ಥೆಯ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು, ವಿದ್ಯಾರ್ಥಿ ಕ್ಷೇಮಾಧಿಕಾರಿ ರೇಷ್ಮಾ ಎಂ ಎಂ, ಕಾರ್ಯಕ್ರಮ ಸಂಯೋಜಕ ವಿನಯ್ ನಿಡ್ಯಮಲೆ ಉಪಸ್ಥಿತರಿದ್ದರು.ವಿದ್ಯಾರ್ಥಿನಿಯರಾ ದ ಪ್ರತೀಕ್ಷಾ ಮತ್ತು ಬಳಗದವರು ರೈತ ಗೀತೆ ಹಾಡಿದರು.,ವಿ ಕ್ಷೇಮಾಧಿಕಾರಿ ರೇಷ್ಮಾ ಎಂ ಎಂ ಸ್ವಾಗತಿಸಿ,ಕಾರ್ಯಕ್ರಮ ಸಂಯೋಜಕ ವಿನಯ್ ನಿಡ್ಯಮಲೆ ವಂದಿಸಿದರು. ಕನ್ನಡ ಉಪನ್ಯಾಸಕಿ ಬೇಬಿ ವಿದ್ಯಾ ಪಿ.ಬಿ ನಿರೂಪಿಸಿದರು. ಸಂಸ್ಥೆಯ ಕಬಡ್ಡಿ ಕೋಚ್ ನಾಗರಾಜ್ ನಾಯ್ಕ್ ಭಟ್ಕಳ, ಕೆವಿಜಿ ಮೆಡಿಕಲ್ ಕಾಲೇಜು ಮತ್ತು ಆಸ್ಪತ್ರೆಯ ದೈ ಶಿ ನಿರ್ದೇಶಕ ಮಿಥನ್ ತೀರ್ಪುಗಾರರಾಗಿ ಸಹಕರಿಸಿದರು. ನವೀನ್ ಬಾoಜಿಕೋಡಿ ವೀಕ್ಷಕ ವಿವರಣೆ ನೀಡಿದರು.ವಿದ್ಯಾರ್ಥಿನಿ ವೈಷ್ಣವಿ ಮತ್ತು ಬಳಗದವರು ನೃತ್ಯ ಪ್ರಸ್ತುತ ಪಡಿಸಿದರು.ಈ ಸಂದರ್ಭದಲ್ಲಿ ಗದ್ದೆಯ ಮಾಲಕರಾದ ಬಾಲಕೃಷ್ಣ ನಾಯ್ಕ್ ಅವರನ್ನು ಸನ್ಮಾನಿಸಲಾಯಿತು.
ವಿದ್ಯಾರ್ಥಿಗಳು ಕೆಸರು ಗದ್ದೆಯಲ್ಲಿ ಕಂಬಳ ಓಟ,ಬುಗರಿ ಓಟ,ವಾಲಿಬಾಲ್,ರಿಲೇ,ಹಗ್ಗಜಗ್ಗಾಟ ಮೊದಲಾದ ಕ್ರೀಡಾ ಕೂಟದಲ್ಲಿ ಭಾಗವಹಿಸಿ ಆಡಿ ನಲಿದು ಅಪೂರ್ವ ಕ್ಷಣಗಳನ್ನು ಸಂಭ್ರಮಿಸಿದರು. ಕಾಲೇಜಿನ ಬೋಧಕ -ಬೋಧಕೇತರ ವೃಂದದವರು ಉಪಸ್ಥಿತರಿದ್ದರು. ಸಮಾರೋಪ ಸಮಾರಂಭದಲ್ಲಿ ಬಹುಮಾನ ವಿತರಿಸಲಾಯಿತು.
ಅಧ್ಯಕ್ಷತೆ ವಹಿಸಿದ್ದ ಸಂಸ್ಥೆಯ ಪ್ರಾಚಾರ್ಯರಾದ ಮಿಥಾಲಿ ಪಿ ರೈ ಅವರು ಮಾತನಾಡಿ ನಮ್ಮ ಮೂಲ ಸಂಸ್ಕೃತಿಯನ್ನು ನಾವೆಲ್ಲರೂ ಬೆಳೆಸಿದಾಗ ಅದರ ಪರಿಚಯ ನಮಗೆ ಆಗಲು ಸಾಧ್ಯ ಎಂದರು.ಮುಖ್ಯ ಅತಿಥಿಗಳಾಗಿ ಪ್ರತಾಪ ಯುವಕ ಮಂಡಲ ಅಜ್ಜಾವರ ಇದರ ಅಧ್ಯಕ್ಷ ಗುರುರಾಜ್ ಅಜ್ಜಾವರ, ಚೈತ್ರ ಯುವತಿ ಮಂಡಲ ಅಜ್ಜಾವರ ಇದರ ಅಧ್ಯಕ್ಷೆ ಶಶ್ಮಿ ಭಟ್ ಹಂಚಿನ ಮನೆ, ಸಂಸ್ಥೆಯ ಆಡಳಿತಾಧಿಕಾರಿ ಚಂದ್ರಶೇಖರ ಪೇರಾಲು, ವಿದ್ಯಾರ್ಥಿ ಕ್ಷೇಮಾಧಿಕಾರಿ ರೇಷ್ಮಾ ಎಂ ಎಂ, ಕಾರ್ಯಕ್ರಮ ಸಂಯೋಜಕ ವಿನಯ್ ನಿಡ್ಯಮಲೆ ಉಪಸ್ಥಿತರಿದ್ದರು.ವಿದ್ಯಾರ್ಥಿನಿಯರಾ
ವಿದ್ಯಾರ್ಥಿಗಳು ಕೆಸರು ಗದ್ದೆಯಲ್ಲಿ ಕಂಬಳ ಓಟ,ಬುಗರಿ ಓಟ,ವಾಲಿಬಾಲ್,ರಿಲೇ,ಹಗ್ಗಜಗ್ಗಾಟ ಮೊದಲಾದ ಕ್ರೀಡಾ ಕೂಟದಲ್ಲಿ ಭಾಗವಹಿಸಿ ಆಡಿ ನಲಿದು ಅಪೂರ್ವ ಕ್ಷಣಗಳನ್ನು ಸಂಭ್ರಮಿಸಿದರು. ಕಾಲೇಜಿನ ಬೋಧಕ -ಬೋಧಕೇತರ ವೃಂದದವರು ಉಪಸ್ಥಿತರಿದ್ದರು. ಸಮಾರೋಪ ಸಮಾರಂಭದಲ್ಲಿ ಬಹುಮಾನ ವಿತರಿಸಲಾಯಿತು.




