ಸುಳ್ಯದ ನೆಹರು ಮೆಮೋರಿಯಲ್ ಪಿಯು ಕಾಲೇಜಿನ ವಿದ್ಯಾರ್ಥಿ ಸಂಘದ ವತಿಯಿಂದ ಶಿಕ್ಷಕರ ದಿನಾಚರಣೆ ಯನ್ನು ಸೆ 5ರಂದು ಆಚರಿಸಲಾಯಿತು. ಅಧ್ಯಕ್ಷತೆಯನ್ನು ಪ್ರಾoಶುಪಾಲೆ ಹರಿಣಿ ಪುತ್ತೂರಾಯ ವಹಿಸಿ ಮಾತನಾಡಿ ಸರ್ವಪಲ್ಲಿ ರಾಧಾಕೃಷ್ಣನ್ ಓರ್ವ ಆದರ್ಶ ಗುರುಗಳು, ಶಿಕ್ಷಣದ ಬಗ್ಗೆ ಅಪಾರ ಕಾಳಜಿ ಹೊಂದಿದವರು.ಅವರ ಆದರ್ಶಗಳನ್ನು ಎಲ್ಲರೂ ಪಾಲಿಸಬೇಕು ಎಂದರು.ವಿದ್ಯಾರ್ಥಿಗಳ ಶೈಕ್ಷಣಿಕ ಬದುಕಿನಲ್ಲಿ ಶಿಕ್ಷಕರ ಪಾತ್ರ ಮುಖ್ಯವಾದುದು. ಶಿಕ್ಷಕರು ಕೂಡ ವಿದ್ಯಾರ್ಥಿಗಳಿಗೆ ಸೂಕ್ತ ಮಾರ್ಗದರ್ಶನ ನೀಡುವ ಮೂಲಕ ವಿದ್ಯಾರ್ಥಿಗಳ ಭವಿಷ್ಯಕ್ಕೆ ದಾರಿ ದೀಪವಾಗುವರು ಎಂದರು . ಅಭಿಜ್ಞಾ ಮತ್ತು ಬಳಗದವರು ಪ್ರಾರ್ಥಿಸಿ, ವಿದ್ಯಾರ್ಥಿ ನಾಯಕ ಧ್ಯಾನ್ ವಿಜಯ್ ಸ್ವಾಗತಿಸಿದರು.ವಿದ್ಯಾರ್ಥಿನಿ ಪೂರ್ವಿ ಕೇಶವ ಮೂರ್ತಿ ಶಿಕ್ಷಕರ ದಿನಾಚರಣೆಯ ಕುರಿತು ಮಾತನಾಡಿದರು.ಕೃತಿ ಜಿ ರಾವ್ & ಬಳಗದವರು ಸಮೂಹ ಗಾಯನ ಹಾಡಿದರು. ವಿದ್ಯಾರ್ಥಿಗಳು ಉಪನ್ಯಾಸಕರಿಗಾಗಿ ಮನೋರಂಜನೆಯ ಸ್ಪರ್ಧೆಗಳನ್ನು ಆಯೋಜಿಸಿದ್ದರು. ಕ್ರೀಡಾ ಕಾರ್ಯದರ್ಶಿ ಮಹಮ್ಮದ್ ಅನಾಸ್, ನಿಶ್ವಿತಾ,ನಿನಾದ್,ಪ್ರಮಿತಾ ಹಾಗೂ ವಿದ್ಯಾರ್ಥಿಗಳು ನೇತೃತ್ವ ವಹಿಸಿದ್ದರು.ಬಳಿಕ ಬೋಧಕ ವೃಂದದವರು ಹಾಡು,ನೃತ್ಯ,ಕಿರು ಪ್ರಹಸನ ಪ್ರಸ್ತುತ ಪಡಿಸಿದರು.ಸಾಂಸ್ಕೃತಿಕ ಕಾರ್ಯದರ್ಶಿ ಗೌತಮ್ ಪಿ ನಿರೂಪಿಸಿ,ತರಗತಿ ಪ್ರತಿನಿಧಿ ಮಿಥುನ್ ನಾಯ್ಕ್ ವಂದಿಸಿದರು.