Workshop by Department of Commerce at Sullia NMPUC.

ಸುಳ್ಯದ ನೆಹರು ಮೆಮೋರಿಯಲ್ ಪ.ಪೂ ಕಾಲೇಜಿನ ವಾಣಿಜ್ಯ ಸಂಘದ ವತಿಯಿಂದ ಬ್ಯಾಂಕ್ ಡ್ರಾಫ್ಟ್ ಬರೆಯುವ ವಿಧಾನದ ಕುರಿತಾಗಿ ಕಾರ್ಯಾಗಾರ ಹಮ್ಮಿಕೊಳ್ಳಲಾಗಿತ್ತು.ಪ್ರಾoಶುಪಾಲರಾದ ಹರಿಣಿ ಪುತ್ತೂರಾಯ ಅವರು ಮಾತನಾಡಿ ಬ್ಯಾಂಕಿಂಗ್ ಕ್ಷೇತ್ರದಲ್ಲಿ ಆಧುನಿಕ ತಂತ್ರಜ್ಞಾನ ಬಂದರೂ ಕೆಲವು ಅನಿವಾರ್ಯ ಸಂದರ್ಭದಲ್ಲಿ ನಾವು ಬ್ಯಾಂಕ್ ವ್ಯವಹಾರಗಳಿಗೆ ಬ್ಯಾಂಕ್ ಡ್ರಾಫ್ಟ್ ಗಳನ್ನು ಭರ್ತಿ ಮಾಡಬೇಕಾಗುತ್ತದೆ.ನಾವು ಈ ಕೌಶಲ್ಯ ಬೆಳೆಸಿಕೊಳ್ಳುವುದರಿಂದ ಆತ್ಮವಿಶ್ವಾಸ ನಮ್ಮಲ್ಲಿ ವೃದ್ಧಿಯಾಗುತ್ತದೆ ಎಂದು ತಿಳಿಸಿ ಕಾರ್ಯಕ್ರಮಕ್ಕೆ ಶುಭ ಹಾರೈಸಿದರು.

ವೇದಿಕೆಯಲ್ಲಿ ವಾಣಿಜ್ಯ ವಿಭಾಗದ ಉಪನ್ಯಾಸಕಿಯರು ಮತ್ತು ವಾಣಿಜ್ಯ ಸಂಘದ ಸಂಚಾಲಕರಾದ ಸಾವಿತ್ರಿ ಕೆ ಮತ್ತು ಹರ್ಷಿತ ಎ.ಬಿ ಉಪಸ್ಥಿತರಿದ್ದರು.ವಿದ್ಯಾರ್ಥಿನಿ ಅಂಬಿಕಾ ಪ್ರಾರ್ಥಿಸಿ,ಉಪನ್ಯಾಸಕಿ ಸಾವಿತ್ರಿ ಕೆ ಸ್ವಾಗತಿಸಿ ಪ್ರಾಸ್ತಾವಿಕ ನುಡಿಗಳನ್ನಾಡಿದರು. ವಿದ್ಯಾರ್ಥಿನಿಯರಾದ ವೈಷ್ಮ ವಂದಿಸಿ,ರಕ್ಷಿತಾ ನಿರೂಪಿಸಿದರು .