ಸುಳ್ಯದ ನೆಹರು ಮೆಮೋರಿಯಲ್ ಪಪೂ ಕಾಲೇಜಿನಲ್ಲಿ ವಿದ್ಯಾರ್ಥಿ ಸಂಘದ ವತಿಯಿಂದ ಟ್ಯಾಲೆಂಟ್ಸ್ ಡೇ ಕಾರ್ಯಕ್ರಮ ಕಾಲೇಜು ಆಡಿಟೋರಿಯಂನಲ್ಲಿ ನಡೆಯಿತು. ಪ್ರಾಚಾರ್ಯರಾದ ಮಿಥಾಲಿ ಪಿ ರೈ ಅವರು ಮಾರ್ಗದರ್ಶನ ನೀಡಿದ್ದರು. ಪ್ರಭಾರ ಪ್ರಾಚಾರ್ಯರಾದ ಸಾವಿತ್ರಿ ಕೆ,ವಿದ್ಯಾರ್ಥಿ ಕ್ಷೇಮಾಧಿಕಾರಿ ರೇಷ್ಮಾ ಎಂ ಎಂ,ಉಪನ್ಯಾಸಕ ವೃಂದದವರು-ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.ವಿದ್ಯಾರ್ಥಿಗಳು ಹಾಡು,ನೃತ್ಯ ವಿವಿಧ ವಿನೋದಾವಳಿಗಳನ್ನು ಸಾದರಪಡಿಸಿದರು.ಉಪನ್ಯಾಸಕ ವಿನಯ್ ನಿಡ್ಯಮಲೆ, ವಿದ್ಯಾರ್ಥಿ ಮಹಮ್ಮದ್ ಆಶಿಕ್ ತಂಡದವರು ಕಾರ್ಯಕ್ರಮ ನಡೆಸಿಕೊಟ್ಟರು.ವಿದ್ಯಾರ್ಥಿ ಸಂಘದ ಸಾಂಸ್ಕೃತಿಕ ಕಾರ್ಯದರ್ಶಿ ಡಿಂಪಲ್ ಸ್ವಾಗತಿಸಿ,ವಿದ್ಯಾರ್ಥಿ ಪ್ರತಿನಿಧಿ ಅನಘ ಸೋನಾ ವಂದಿಸಿದರು.




