News & Events

ಸುಳ್ಯ ತಾಲೂಕು ಕ್ರೀಡಾಕೂಟ-2019

ಪದವಿಪೂರ್ವ ಶಿಕ್ಷಣ ಇಲಾಖೆ ಮಂಗಳೂರು  ಮತ್ತು ನೆಹರು ಮೆಮೋರಿಯಲ್ ಪ.ಪೂ ಕಾಲೇಜು ಸುಳ್ಯ ಇದರ ಸಹಯೋಗದಲ್ಲಿ ತಾಲೂಕು ಮಟ್ಟದ ಪದವಿಪೂರ್ವ ವಿಭಾಗದ ಕ್ರೀಡಾಕೂಟ ಅಕ್ಟೊಬರ್ 1 ರಂದು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು ಇಲ್ಲಿನ ಕ್ರೀಡಾಂಗಣದಲ್ಲಿ ಉದ್ಘಾಟನೆಗೊಂಡಿತು. ಕ್ರೀಡೆಯಲ್ಲಿ ವಿಶೇಷ ಸಾಧನೆ ಮಾಡಿದ ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು ಇಲ್ಲಿನ ವಿದ್ಯಾರ್ಥಿಗಳು ಕ್ರೀಡಾಜ್ಯೋತಿಯನ್ನು ಹೊತ್ತು ಕ್ರೀಡಾಂಗಣವನ್ನು ಪ್ರವೇಶಿಸುವುದರೊಂದಿಗೆ ಕ್ರೀಡಾಕೂಟವನ್ನು ಕೆವಿಜಿ ಸಮೂಹ ಸಂಸ್ಥೆಗಳ ನಿರ್ದೇಶಕರಾದ ಶ್ರೀಮತಿ ಶೋಭಾ ಚಿದಾನಂದ ರವರು ದ್ವಜಾರೋಹಣಗೈದು, ದೀಪ ಬೆಳಗುವುದರ […]

ಸುಳ್ಯ ತಾಲೂಕು ಕ್ರೀಡಾಕೂಟ-2019 Read More »

ರಾಜ್ಯ ಮಟ್ಟದ ಕಬಡ್ಡಿ ತಂಡಕ್ಕೆ ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನಿಂದ ಆಯ್ಕೆ- ಅಭಿನಂದನೆಗಳು

ರಾಜ್ಯ ಮಟ್ಟದ  ಹುಡುಗರ ಕಬಡ್ಡಿ ತಂಡಕ್ಕೆ ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು, ಸುಳ್ಯ ಇಲ್ಲಿನ ದ್ವಿತೀಯ ಪಿಯುಸಿ ಕಲಾ ವಿಭಾಗದ ಅಭಿಷೇಕ್ ಮತ್ತು ಹುಡುಗಿಯರ ರಾಜ್ಯ ಕಬಡ್ಡಿ ತಂಡಕ್ಕೆ ದ್ವಿತೀಯ ವಾಣಿಜ್ಯ ವಿಭಾಗದ ವಿಸ್ಮಿತ ಆಯ್ಕೆಗೊಂಡಿರುತ್ತಾರೆ. ಇವರನ್ನು ಕಾಲೇಜಿನ   ಆಡಳಿತ ಮಂಡಳಿಯವರು ಮತ್ತು ಪ್ರಾಂಶುಪಾಲರು ಅಭಿನಂದಿಸಿರುತ್ತಾರೆ.

ರಾಜ್ಯ ಮಟ್ಟದ ಕಬಡ್ಡಿ ತಂಡಕ್ಕೆ ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜಿನಿಂದ ಆಯ್ಕೆ- ಅಭಿನಂದನೆಗಳು Read More »

ಜಿಲ್ಲಾಮಟ್ಟದ ಪದವಿಪೂರ್ವ ವಿಭಾಗದ ಕಬಡ್ಡಿ ಪಂದ್ಯಾಟ -ಸಮಾರೋಪ ಸಮಾರಂಭ

ಸಮಾರೋಪ ಸಮಾರಂಭ ಸಂಜೆ ನಡೆದ ಸಮಾರೋಪ ಸಮಾರಂಭ ದಲ್ಲಿ ಮುಖ್ಯ ಅತಿಥಿಗಳಾಗಿ  ನೆಹರು ಮೆಮೋರಿಯಲ್ ಪದವಿ   ಕಾಲೇಜು ಇದರ ಪ್ರಾಂಶುಪಾಲರು ಡಾ. ಕೆ. ಗಿರಿಧರ ಗೌಡ ಮತ್ತು ನೆಹರು ಮೆಮೋರಿಯಲ್ ಪದವಿ   ಕಾಲೇಜು ಇಲ್ಲಿನ ಶೈಕ್ಷಣಿಕ ಸಲಹೆಗಾರರಾದ ಪ್ರೊ.ಬಾಲಚಂದ್ರ ಗೌಡ ಅವರು ಭಾಗವಹಿಸಿದ್ದರು.  ಡಾ. ಕೆ. ಗಿರಿಧರ ಗೌಡ ಅವರು ಮಾತನಾಡಿ , ಕಬಡ್ಡಿ ದೈಹಿಕ ಕ್ಷಮತೆಯನ್ನು ಹೆಚ್ಚಿಸುವುದರ ಮೂಲಕವಾಗಿ ಬೆಳವಣಿಗೆಗೆ ಸಹಕಾರಿಯಾಗುತ್ತದೆ ಎನ್ನುತ್ತಾ ಸೋಲು ಗೆಲುವುಗಳನ್ನು ಸಮಭಾವದಿಂದ ಸ್ವೀಕಾರ ಮಾಡಬೇಕು ಎಂದರು .  ಪ್ರೊ.ಬಾಲಚಂದ್ರ ಗೌಡ

ಜಿಲ್ಲಾಮಟ್ಟದ ಪದವಿಪೂರ್ವ ವಿಭಾಗದ ಕಬಡ್ಡಿ ಪಂದ್ಯಾಟ -ಸಮಾರೋಪ ಸಮಾರಂಭ Read More »

ಜಿಲ್ಲಾಮಟ್ಟದ ಪದವಿಪೂರ್ವ ವಿಭಾಗದ ಕಬಡ್ಡಿ ಪಂದ್ಯಾಟ

ಪ್ರಥಮ (Girls) – ಮಂಗಳೂರು ಗ್ರಾಮಾಂತರ – Alvas Moodabidre ದ್ವಿತೀಯ -ಬೆಳ್ತಂಗಡಿ- SDM College Ujire ಪ್ರಥಮ (Boys) – ಮಂಗಳೂರು ಸಿಟಿ – Vikas PU College ದ್ವಿತೀಯ -ಪುತ್ತೂರು- Govt College Uppinangady

ಜಿಲ್ಲಾಮಟ್ಟದ ಪದವಿಪೂರ್ವ ವಿಭಾಗದ ಕಬಡ್ಡಿ ಪಂದ್ಯಾಟ Read More »

ಜಿಲ್ಲಾಮಟ್ಟದ ಪದವಿಪೂರ್ವ ವಿಭಾಗದ ಕಬಡ್ಡಿ ಪಂದ್ಯಾಟ

ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ನೆಹರು ಮೆಮೋರಿಯಲ್ ಪ.ಪೂ ಕಾಲೇಜು ಸುಳ್ಯ ಇದರ ಸಹಯೋಗದಲ್ಲಿ ಜಿಲ್ಲಾಮಟ್ಟದ ಪದವಿಪೂರ್ವ ವಿಭಾಗದ ಕಬಡ್ಡಿ ಪಂದ್ಯಾಟ  ಸೆ. 19 ರಂದು ಕಾಲೇಜು ಮೈದಾನದಲ್ಲಿ ನಡೆಯಿತು. ಉಧ್ಘಾಟನೆಯನ್ನು ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ನಿತ್ಯಾನಂದ ಮುಂಡೋಡಿಯವರು ನೆರವೇರಿಸಿ ಕಬಡ್ಡಿ ರಾಷ್ಟ್ರೀಯ ಮಾನ್ಯತೆ ಪಡೆದ ಆಟವಾಗಿದ್ದು ಇಂದು ವಿಶ್ವದಲ್ಲಿ ಜನಪ್ರಿಯ ಕ್ರೀಡೆಯಾಗಿದೆ ಎಂದರು. ಮುಖ್ಯ ಅತಿಥಿಯಾಗಿದ್ದ ಸುಳ್ಯದ ತಹಶೀಲ್ದಾರ್ ಶ್ರೀ ಕು. ಅಹಮದ್ ಅವ್ರು ಮಾತನಾಡಿ ಕ್ರೀಡಾ ಸ್ಪೂರ್ತಿಯೊಂದಿಗೆ ಪರಸ್ಪರ

ಜಿಲ್ಲಾಮಟ್ಟದ ಪದವಿಪೂರ್ವ ವಿಭಾಗದ ಕಬಡ್ಡಿ ಪಂದ್ಯಾಟ Read More »

ಯಜ್ನೇಶ್ ಕೆ. – ಮುಕ್ತ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ

ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು, ಸುಳ್ಯ ಇಲ್ಲಿನ ದ್ವಿತೀಯ ಕಲಾ ವಿಭಾಗದ ವಿದ್ಯಾರ್ಥಿ ಯಜ್ನೇಶ್ ಕೆ. ಇವರು ಬೆಂಗಳೂರಿನಲ್ಲಿ ನಡೆದ ಮುಕ್ತ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ    ಕಾಲೇಜಿನ ಆಡಳಿತ ಮಂಡಳಿ ಮತ್ತು ಪ್ರಾಂಶುಪಾಲರು ತಂಡವನ್ನು ಅಭಿನಂದಿಸಿರುತ್ತಾರೆ.

ಯಜ್ನೇಶ್ ಕೆ. – ಮುಕ್ತ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ Read More »

ದಸರಾ ಕ್ರೀಡಾಕೂಟದಲ್ಲಿ ಕಬಡ್ಡಿಯಲ್ಲಿ ಪ್ರಶಸ್ತಿ

ಅಭಿನಂದನೆಗಳು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯಿಂದ ನಡೆಸಲ್ಪಟ್ಟ ಸುಳ್ಯ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಕಬಡ್ಡಿಯಲ್ಲಿ ನಮ್ಮ ಕಾಲೇಜು ಹುಡುಗರ ತಂಡವು ದ್ವಿತೀಯ ಸ್ಥಾನವನ್ನು ಗಳಿಸಿದ್ದು, ನೆಹರು ಮೆಮೋರಿಯಲ್ ಪದವಿ ಮತ್ತು ಪದವಿಪೂರ್ವ ಹುಡುಗಿಯರನ್ನೊಳಗೊಂಡ ತಂಡವು ತಾಲೂಕಿಗೆ  ಪ್ರಥಮ ಸ್ಥಾನವನ್ನು ಗಳಿಸಿರುತ್ತದೆ. ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಎಲ್ಲ ಅಧ್ಯಾಪಕ , ಅಧ್ಯಾಪಕೇತರ ಮತ್ತು ವಿದ್ಯಾರ್ಥಿಗಳ ಪರವಾಗಿ ತಂಡಗಳಿಗೆ ಹಾರ್ದಿಕ ಅಭಿನಂದನೆಗಳು.

ದಸರಾ ಕ್ರೀಡಾಕೂಟದಲ್ಲಿ ಕಬಡ್ಡಿಯಲ್ಲಿ ಪ್ರಶಸ್ತಿ Read More »