ಜಿಲ್ಲಾಮಟ್ಟದ ಪದವಿಪೂರ್ವ ವಿಭಾಗದ ಕಬಡ್ಡಿ ಪಂದ್ಯಾಟ
ಜಿಲ್ಲಾಮಟ್ಟದ ಪದವಿಪೂರ್ವ ವಿಭಾಗದ ಕಬಡ್ಡಿ ಪಂದ್ಯಾಟ Read More »
ಪದವಿಪೂರ್ವ ಶಿಕ್ಷಣ ಇಲಾಖೆ ಮತ್ತು ನೆಹರು ಮೆಮೋರಿಯಲ್ ಪ.ಪೂ ಕಾಲೇಜು ಸುಳ್ಯ ಇದರ ಸಹಯೋಗದಲ್ಲಿ ಜಿಲ್ಲಾಮಟ್ಟದ ಪದವಿಪೂರ್ವ ವಿಭಾಗದ ಕಬಡ್ಡಿ ಪಂದ್ಯಾಟ ಸೆ. 19 ರಂದು ಕಾಲೇಜು ಮೈದಾನದಲ್ಲಿ ನಡೆಯಿತು. ಉಧ್ಘಾಟನೆಯನ್ನು ಕುಕ್ಕೆಶ್ರೀ ಸುಬ್ರಹ್ಮಣ್ಯ ದೇವಳದ ವ್ಯವಸ್ಥಾಪನಾ ಸಮಿತಿಯ ಅಧ್ಯಕ್ಷರಾದ ಶ್ರೀ ನಿತ್ಯಾನಂದ ಮುಂಡೋಡಿಯವರು ನೆರವೇರಿಸಿ ಕಬಡ್ಡಿ ರಾಷ್ಟ್ರೀಯ ಮಾನ್ಯತೆ ಪಡೆದ ಆಟವಾಗಿದ್ದು ಇಂದು ವಿಶ್ವದಲ್ಲಿ ಜನಪ್ರಿಯ ಕ್ರೀಡೆಯಾಗಿದೆ ಎಂದರು. ಮುಖ್ಯ ಅತಿಥಿಯಾಗಿದ್ದ ಸುಳ್ಯದ ತಹಶೀಲ್ದಾರ್ ಶ್ರೀ ಕು. ಅಹಮದ್ ಅವ್ರು ಮಾತನಾಡಿ ಕ್ರೀಡಾ ಸ್ಪೂರ್ತಿಯೊಂದಿಗೆ ಪರಸ್ಪರ
ಜಿಲ್ಲಾಮಟ್ಟದ ಪದವಿಪೂರ್ವ ವಿಭಾಗದ ಕಬಡ್ಡಿ ಪಂದ್ಯಾಟ Read More »
First Place in Quiz First Place in Social Awareness Song
Winners of PRERANA 2K19 @ NMC Read More »
ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು, ಸುಳ್ಯ ಇಲ್ಲಿನ ದ್ವಿತೀಯ ಕಲಾ ವಿಭಾಗದ ವಿದ್ಯಾರ್ಥಿ ಯಜ್ನೇಶ್ ಕೆ. ಇವರು ಬೆಂಗಳೂರಿನಲ್ಲಿ ನಡೆದ ಮುಕ್ತ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನವನ್ನು ಗಳಿಸಿರುತ್ತಾರೆ ಕಾಲೇಜಿನ ಆಡಳಿತ ಮಂಡಳಿ ಮತ್ತು ಪ್ರಾಂಶುಪಾಲರು ತಂಡವನ್ನು ಅಭಿನಂದಿಸಿರುತ್ತಾರೆ.
ಯಜ್ನೇಶ್ ಕೆ. – ಮುಕ್ತ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ Read More »
ಅಭಿನಂದನೆಗಳು ಯುವಜನ ಸೇವಾ ಮತ್ತು ಕ್ರೀಡಾ ಇಲಾಖೆಯಿಂದ ನಡೆಸಲ್ಪಟ್ಟ ಸುಳ್ಯ ತಾಲೂಕು ಮಟ್ಟದ ದಸರಾ ಕ್ರೀಡಾಕೂಟದಲ್ಲಿ ಕಬಡ್ಡಿಯಲ್ಲಿ ನಮ್ಮ ಕಾಲೇಜು ಹುಡುಗರ ತಂಡವು ದ್ವಿತೀಯ ಸ್ಥಾನವನ್ನು ಗಳಿಸಿದ್ದು, ನೆಹರು ಮೆಮೋರಿಯಲ್ ಪದವಿ ಮತ್ತು ಪದವಿಪೂರ್ವ ಹುಡುಗಿಯರನ್ನೊಳಗೊಂಡ ತಂಡವು ತಾಲೂಕಿಗೆ ಪ್ರಥಮ ಸ್ಥಾನವನ್ನು ಗಳಿಸಿರುತ್ತದೆ. ಕಾಲೇಜಿನ ಆಡಳಿತ ಮಂಡಳಿ, ಪ್ರಾಂಶುಪಾಲರು ಮತ್ತು ಎಲ್ಲ ಅಧ್ಯಾಪಕ , ಅಧ್ಯಾಪಕೇತರ ಮತ್ತು ವಿದ್ಯಾರ್ಥಿಗಳ ಪರವಾಗಿ ತಂಡಗಳಿಗೆ ಹಾರ್ದಿಕ ಅಭಿನಂದನೆಗಳು.
ದಸರಾ ಕ್ರೀಡಾಕೂಟದಲ್ಲಿ ಕಬಡ್ಡಿಯಲ್ಲಿ ಪ್ರಶಸ್ತಿ Read More »
ಹಿಂದಿ ಭಾಷೆ ಸಂಸ್ಕೃತಿಯ ಒಂದು ಭಾಗವಾಗಿ ಪ್ರಪಂಚದಲ್ಲಿ ವಿಸ್ತಾರವಾಗಿ ಹಬ್ಬಿದ್ದು ಅದನ್ನು ಬೆಳೆಸುವಲ್ಲಿ ನಾವು ಪ್ರಮುಖ ಪಾತ್ರ ವಹಿಸಬೇಕೆಂದು ಎಂದು ಮೇಧಾ ಕಾಲೇಜಿನ ಉಪನ್ಯಾಸಕಿ ಶ್ರೀಮತಿ ಪ್ರಫುಲ್ಲ ಅವರು ಹೇಳಿದರು. ಅವರು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು, ಸುಳ್ಯ ಇಲ್ಲಿ ಆಯೋಜಿಸಲಾದ ಹಿಂದಿ ದಿನಾಚರಣೆಯಲ್ಲಿ ಅತಿಥಿಯಾಗಿ ಆಗಮಿಸಿ ಮಾತನಾಡುತ್ತಿದ್ದರು. ಭಾಷೆಯನ್ನು ಕಲಿತು ಮಾತನಾಡಿದಾಗ ಮಾತ್ರ ಭಾಷೆಯ ಸಮೃದ್ಧತೆ ಹೆಚ್ಚತ್ತದೆ ಎಂದು ಹೇಳಿದರು. ಕಾಲೇಜಿನ ಹಿಂದಿ ಉಪನ್ಯಾಸಕಿ ಶ್ರೀಮತಿ ರಾಜೇಶ್ವರಿ ಪ್ರಾಸ್ತಾವಿಕವಾಗಿ ಮಾತನಾಡಿದರು. ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರು
ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು, ಸುಳ್ಯ ಇಲ್ಲಿ ಓಣಂ ಪ್ರಯುಕ್ತ ಪೂಕಳಂ ಹಾಕಿ ಹಬ್ಬವನ್ನು ಆಚರಿಸಲಾಯಿತು
ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು, ಸುಳ್ಯ ಇಲ್ಲಿ ಓಣಂ ಆಚರಣೆ Read More »
ಸೇವಾ ಬದ್ಧತೆಯಿಂದ ಹತ್ತು ಹಲವು ಪಾತ್ರಗಳನ್ನುನಿರ್ವಹಿಸುವವರು ದಾದಿಯರು – ಶ್ರೀಮತಿ ಪ್ರೇಮ ಬಿ ಎಂ ದಾದಿಯರು ಕೇವಲ ಅನಾರೋಗ್ಯದ ಸಂದರ್ಭದಲ್ಲಿ ಮಾತ್ರ ಸೇವೆಗೆ ಸೀಮಿತರಲ್ಲ. ಅವರು ವಿವಿಧ ಪಾತ್ರಗಳನ್ನು ಆರೋಗ್ಯಕ್ಷೇತ್ರದಲ್ಲಿ ಸಮರ್ಥವಾಗಿ ನಿಭಾಯಿಸುವವರು. ಸೇವಾ ಮನೋಭಾವದಿಂದ ಕರ್ತವ್ಯ ನಿರ್ವಹಿಸುವ ಇವರು ಓರ್ವ ಆಡಳಿತಗಾರಳಾಗಿ , ಶಿಕ್ಷಕಿಯಾಗಿ , ಮಾರ್ಗದರ್ಶಕಳಾಗಿ ಹೀಗೆ ಹತ್ತು ಹಲವು ಪಾತ್ರಗಳನ್ನು ಸೇವಾ ಬದ್ಧತೆಯಿಂದ ನಿರ್ವಹಿಸುತ್ತಾ ಸಮಾಜದ ಆರೋಗ್ಯವನ್ನು ವರ್ಧಿಸುವ ಕಾರ್ಯಗಳನ್ನು ಮಾಡುವವರು ಎಂದು ಕೆವಿಜಿ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ಪ್ರೇಮ ಬಿ
ಸೇವಾ ಬದ್ಧತೆಯಿಂದ ಹತ್ತು ಹಲವು ಪಾತ್ರಗಳನ್ನುನಿರ್ವಹಿಸುವವರು ದಾದಿಯರು – ಶ್ರೀಮತಿ ಪ್ರೇಮ ಬಿ ಎಂ Read More »
ತನ್ನ ಗುರಿ ಸಾಧಿಸಬೇಕಾದರೆ ವಿದ್ಯಾರ್ಥಿಯು ನಾಯಕತ್ವ ಗುಣಗಳನ್ನು ಮೈಗೂಡಿಸಿಕೊಳ್ಳಬೇಕು.ತನ್ನನ್ನು ಅಧೋಗತಿಗೆ ತಳ್ಳುವ ಹವ್ಯಾಸ , ಸಹವಾಸ ಮತ್ತು ಆಲೋಚನೆಗಳಿನ್ದ ಹೊರಬಂದು ಧನಾತ್ಮಕವಾಗಿ ಆಲೋಚನೆ ಮಾಡುತ್ತಾ ಆರೋಗ್ಯಕರ ಬೆಳವಣಿಗೆಯನ್ನು ಕಾಣುವಂತಾಗಬೇಕು ಎಂದು ನೆಹರು ಮೆಮೋರಿಯಲ್ ಪದವಿ ಕಾಲೇಜಿನ ಕನ್ನಡ ಉಪನ್ಯಾಸಕಿ ಡಾ. ಅನುರಾಧ ಕುರುಂಜಿ ಹೇಳಿದರು. ಅವರು ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು ಇಲ್ಲಿನ ಮಾನವಿಕ ಸಂಘ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ವ್ಯಕ್ತಿತ್ವ ವಿಕಸನ ತರಬೇತಿ ಕಾರ್ಯಕ್ರಮದಲ್ಲಿ ಮಾತನಾಡುತ್ತಿದ್ದರು. ಕಾಲೇಜಿನ ಕಲಾ ವಿಭಾಗದ ಅಧ್ಯಾಪಕರು ಉಪಸ್ಥಿತರಿದ್ದರು
ವ್ಯಕ್ತಿತ್ವ ವಿಕಸನ- ತರಬೇತಿ ಕಾರ್ಯಕ್ರಮ Read More »
ನೆಹರು ಮೆಮೋರಿಯಲ್ ಪದವಿ ಪೂರ್ವ ಕಾಲೇಜು, ಸುಳ್ಯ ಇಲ್ಲಿನ ವಿದ್ಯಾರ್ಥಿಗಳ ತಂಡ ಸುಳ್ಯ ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ ಗಳಿಸಿದ್ದು ವಿದ್ಯಾರ್ಥಿಗಳಾದ ದ್ವಿತೀಯ ಕಲಾ ವಿಭಾಗದ ಯಜ್ನೇಶ್, ಪ್ರಥಮ ವಾಣಿಜ್ಯ ವಿಭಾಗದ ರಮೇಶ್ ಮತ್ತು ವಿಜ್ಞಾನ ವಿಭಾಗದ ಸೃಜನ್ ಜಿಲ್ಲಾ ಮಟ್ಟಕ್ಕೆ ಆಯ್ಕೆಗೊಂಡಿರುತ್ತಾರೆ. ಇವರನ್ನು ಕಾಲೇಜಿನ ಆಡಳಿತ ಮಂಡಳಿಯವರು ಮತ್ತು ಪ್ರಾಂಶಪಾಲರು ಅಭಿನಂದಿಸಿರುತ್ತಾರೆ.
ತಾಲೂಕು ಮಟ್ಟದ ಶಟಲ್ ಬ್ಯಾಡ್ಮಿಂಟನ್ ಪಂದ್ಯಾಟದಲ್ಲಿ ಪ್ರಥಮ ಸ್ಥಾನ Read More »